Wednesday, April 1, 2009

ಕಾಫಿ ಕ್ಲಬ್ಬಿಗೆ ಬೀಗ

 

ವ್ಯಾಲಂಟೈನ್ ಡೇ ಸಂದರ್ಭದಲ್ಲಿ ನಾಡಿನ ಪ್ರಮುಖ ಸಂಘಟನೆಯ ವಿರುದ್ಧ ಕೆಲವು ಅವಹೇಳನಕಾರಿ ಪ್ರತಿಕ್ರಿಯೆಗಳನ್ನು, ಹೇಳಿಕೆಗಳನ್ನು ಪ್ರಕಟಿಸಿದ್ದೇವೆ ಎಂಬ ಕಾರಣಕ್ಕೆ ‘ಕಾಫಿ ಕ್ಲಬ್’ನ ಮೇಲೆ ಆ ಸಂಘಟನೆಯ ಕಣ್ಣು ಬಿದ್ದಿತ್ತು. ನಮ್ಮ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸುವ ಸಂಬಂಧ ಆ ಸಂಘಟನೆ ನಡೆಸುತ್ತಿದ್ದ ಪ್ರಯತ್ನಗಳನ್ನು ಇಷ್ಟು ದಿನ ನಾವು ಮೌನವಾಗಿ ಗಮನಿಸುತ್ತಿದ್ದೆವು. ಹೀಗಾಗಿ ಕ್ಲಬ್ಬಲ್ಲಿ ಹೆಚ್ಚಿನ ಚರ್ಚೆ ನಡೆದಿರಲಿಲ್ಲ.

ಈಗ ನ್ಯಾಯಾಲಯದಲ್ಲಿ ಕೇಸು ಕಡೆಯ ಹಂತಕ್ಕೆ ಬಂದಿದೆ. ಒಂದು ಜವಾಬ್ದಾರಿಯುತ ಸಂಘಟನೆಯ ಬಗ್ಗೆ, ಗೌರವಯುತ ಸಂಘಟಕನ ಬಗ್ಗೆ ಅವಹೇಳನಕಾರಿಯಾಗಿ ಬ್ಲಾಗಿನಲ್ಲಿ ಬರೆದದ್ದು ತಪ್ಪೆಂದು ನ್ಯಾಯಾಲಯ ತೀರ್ಪಿತ್ತಿದೆ. ತತ್ಸಂಬಂಧ ಈ ಬ್ಲಾಗಿನ ಮಾಲೀಕರನ್ನು, ಬರಹಗಾರರನ್ನೂ ವಾಗ್ದಂಡನೆಗೆ ಗುರಿ ಮಾಡಿ, ಅವರಿಂದ ಬೇಷರತ್ ಕ್ಷಮೆಯನ್ನು ಪಡೆಯುವ, ಬ್ಲಾಗನ್ನು ಮುಚ್ಚುವ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಲಾಗಿದೆ.

ಈ ಕಡೆಯ ಪೋಸ್ಟಿನಲ್ಲಿ, ಈ ಬ್ಲಾಗಿನ ಮಾಲೀಕನಾದ ನಾನು ಸುಪ್ರೀತ್.ಕೆ.ಎಸ್ ಆ ಸಂಘಟನೆಯ ಹಾಗೂ ಅದರ ಮುಖಂಡರ ಕ್ಷಮೆಯಾಚಿಸುವೆ. ಇನ್ನು ಮುಂದೆ ಇಂತಹ ಯಾವ ಕೆಲಸವನ್ನೂ ಮಾಡುವುದಿಲ್ಲ ಎಂದು ಮುಚ್ಚಳಿಕೆ ನೀಡುವೆ.

ವಿ.ಸೂ: ಈ ಬ್ಲಾಗಿನಲ್ಲಿ ಇನ್ನು ಮುಂದೆ ಯಾವುದೇ ಬರಹ ಪ್ರಕಟವಾಗೋದಿಲ್ಲ.

7 comments:

  1. ರುಚಿಯಾದ ಕಾಫೀ ಬೇಕೆಂದು ಬಂದ್ರೆ..
    ಏನೇನೋ ಮಾತಾಡ್ತಿರಲ್ರೀ...!

    ReplyDelete
  2. ಎಪ್ರೀಲ್ ಫೂಲ್!

    ReplyDelete
  3. ನಂಗೂ ಗೊತ್ತಾಗಿತ್ತು....

    ಸರಿಯಾಗಿ ನನ್ನ ಪ್ರತಿಕ್ರಿಯೆ ಓದಿ.... ಸ್ವಾಮಿ....!

    ಹಾಗಾಗಿದ್ದರೆ..
    ನಿಮ್ಮ ಕ್ಲಬ್ಬಿನ ಖಾಯಮ್ ಸದಸ್ಯನಾದ ನಾನು..

    "ಸಹಾನು ಭೂತಿ" ವ್ಯಕ್ತಪಡಿಸುತ್ತಿದ್ದೆ....

    ಅಲ್ಲವೆ...?

    ReplyDelete
  4. ಸುಪ್ರೀತ್ ರೇ,


    ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು!;)

    -ರಂಜಿತ್

    ReplyDelete
  5. ಏಪ್ರಿಲ್ ಒಂದರ ಚೇಷ್ಟೆ ಇದು ಎಂದು ಪತ್ತೆ ಹಚ್ಚಿದ ಎಲ್ಲರಿಗೂ ಅಭಿನಂದನೆಗಳು...

    ReplyDelete

ಕಾಫಿ ಕುಡೀತಾ ಹಂಗೇ ಒಂದಿಷ್ಟು ಮಾತಾಡಿ